ಕೊರೋನಾ ಸೋಂಕಿನ ಅಬ್ಬರ : ರಾಜ್ಯದಲ್ಲಿ ಟಫ್ ರೂಲ್ಸ್

ಕೊರೋನಾ ಸೋಂಕಿನ ಅಬ್ಬರ : ರಾಜ್ಯದಲ್ಲಿ ಟಫ್ ರೂಲ್ಸ್

ಬೀದರ್ : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಅಬ್ಬರ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಉಪಚುನಾವಣೆ ಮುಗಿದ ಬಳಿಕ ರಾಜ್ಯದಲ್ಲಿ ಟಫ್ ರೂಲ್ಸ್ ಜಾರಿ ಮಾಡಲಾಗುವುದು ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬಿ.ಎಸ್. ಯಡಿಯೂರಪ್ಪ, ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಉಪಚುನಾವಣೆ ಮುಗಿದ ಬಳಿಕ, ಏಪ್ರಿಲ್ ೧೭ ರಿಂದ ಕಠಿಣ ನಿಯಮಗಳನ್ನು ಜಾರಿಗೊಳಿಸಲಾಗುವುದು ಎಂದು ತಿಳಿಸಿದ್ದಾರೆ.
ಕೊರೊನಾ ವೈರಸ್ ಕುರಿತಂತೆ ರಾಜ್ಯದ ಜನರು ಜಾಗೃತರಾಗಿರಬೇಕು. ಈಗಾಗಲೇ ಹಲವು ನಗರಗಳಲ್ಲಿ ನೈಟ್ ಕರ್ಪ್ಯೂ ಜಾರಿಗೊಳಿಸಲಾಗಿದ್ದು, ಬೇರೆ ಜಿಲ್ಲೆಗಳಲ್ಲಿ ಕೊರೊನಾ ವೈರಸ್ ಜಾಸ್ತಿ ಅದ್ರೆ ಅಲ್ಲಿಯೂ ಕೂಡ ನೈಟ್ ಕರ್ಪ್ಯೂ ಜಾರಿಗೊಳಿಸಲಾಗಿದೆ. ಇನ್ನೊಂದು ವಾರ ಕಾದು ನೋಡಿ ರಾಜ್ಯದಲ್ಲಿ ಕಠಿಣ ನಿಯಮಗಳನ್ನು ಜಾರಿಗೊಳಿಸಲಾಗುವುದು ಎಂದು ಹೇಳಿದ್ದಾರೆ.