ಮಂಜು ಪುತ್ರನ ಚಿತ್ರಕ್ಕೆ ನಂದ ಕಿಶೋರ್ ನಿರ್ದೇಶಕ

ಮಂಜು ಪುತ್ರನ ಚಿತ್ರಕ್ಕೆ ನಂದ ಕಿಶೋರ್ ನಿರ್ದೇಶಕ

ಪೊಗರು ಯಶಸ್ವಿಯಾಗಿರುವ ಬೆನ್ನಲ್ಲೇ ನಿರ್ದೇಶಕ ನಂದ ಕಿಶೋರ್ ಅವಕಾಶಗಳ ಮಹಾಪೂರವೇ ಹರಿದು ಬರುತ್ತಿದ್ದು ಹಿರಿಯ  ನಿರ್ಮಾಪಕ ಕೆ.ಮಂಜು ಅವರ ಪುತ್ರ ಶ್ರೇಯಸ್ ಅವರು ನಾಯಕನಾಗಿ ನಟಿಸುತ್ತಿರುವ ನೂತನ ಚಿತ್ರಕ್ಕೆ ನಂದ ಕಿಶೋರ್ ಆ?ಯಕ್ಷನ್ ಕಟ್ ಹೇಳಲಿದ್ದಾರೆ.
ಶ್ರೇಯಸ್ ಕೆ.ಮಂಜು ಅವರ ಜನ್ಮದಿನದ ಸಂದರ್ಭದಲ್ಲಿ ನೂತನ ಚಿತ್ರದ ಘೋಷಣೆಯಾಗಿದೆ. ಯುಗಾದಿ ಹಬ್ಬ ಕಳೆದ ತಕ್ಷಣ ಈ ಚಿತ್ರದ ಮುಹೂರ್ತ ನೆರವೇರಲಿದೆ. ಗುಜ್ಜಲ್ ಟಾಕೀಸ್ ಲಾಂಛನದಲ್ಲಿ ಗುಜ್ಜಲ್ ಪುರುಷೋತ್ತಮ್ ಈ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ.
ಇವರು ಈ ಹಿಂದೆ ಕೆ.ಪಿ.ಶ್ರೀಕಾಂತ್ ನಿರ್ಮಾಣದ ‘ಟಗರು’ ಚಿತ್ರದಲ್ಲಿ ಕಾರ್ಯಕಾರಿ ನಿರ್ಮಾಪಕರಾಗಿ ಕಾರ್ಯ ನಿರ್ವಹಿಸಿದ್ದರು. ಇದು ಅವರು ತಮ್ಮ ಬ್ಯಾನರ್‌ನಲ್ಲಿ ನಿರ್ಮಿಸುತ್ತಿರುವ ಮೊದಲ ಚಿತ್ರವಾಗಿದೆ.
‘ಪ್ರೊಡಕ್ಷನ್ ನಂ ೧’ ಹೆಸರಿನಲ್ಲಿ ಚಿತ್ರದ ಚಟುವಟಿಕೆಗಳು ಆರಂಭವಾಗಿದ್ದು, ಸದ್ಯದಲ್ಲೇ ಶೀರ್ಷಿಕೆ ಅನಾವರಣಗೊಳಿಸುವುದಾಗಿ ನಿರ್ಮಾಪಕರು ತಿಳಿಸಿದ್ದಾರೆ.
ಧರ್ಮವಿಶ್ ಸಂಗೀತ ನೀಡುತ್ತಿರುವ ಈ ಚಿತ್ರಕ್ಕೆ ಶೇಖರ್ ಚಂದ್ರು ಛಾಯಾಗ್ರಹಣ ಹಾಗೂ ಕೆ.ಎಂ.ಪ್ರಕಾಶ್ ಸಂಕಲನವಿದೆ. ಪ್ರಶಾಂತ್ ರಾಜಪ್ಪ ಸಂಭಾಷಣೆ ಬರೆಯುತ್ತಿದ್ದಾರೆ. ಚಿತ್ರದ ಕುರಿತು ಹೆಚ್ಚಿನ ಮಾಹಿತಿಯನ್ನು ಸದ್ಯದಲ್ಲೇ ತಿಳಿಸುವೆ ಎಂದಿದ್ದಾರೆ ನಿರ್ಮಾಪಕರು.