ರಜನಿಕಾಂತ್ ಆಸ್ಪತ್ರೆಗೆ ದಾಖಲು

ರಜನಿಕಾಂತ್ ಆಸ್ಪತ್ರೆಗೆ ದಾಖಲು

ಹೈದ್ರಾಬಾದ್ : ರಜನಿ ಅವರಿಗೆ ರಕ್ತದೊತ್ತಡ ಸಹಜ ಸ್ಥಿತಿಗೆ ಮರಳುವವರೆಗೂ ಚಿಕಿತ್ಸೆ ಮುಂದುವರೆಸಲಾಗುವುದು ಎಂದು ಅಪೊಲೊ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ. ರಜನಿಕಾಂತ್ ನಟಿಸುತ್ತಿರುವ ಅಣ್ಣಾತೈ ಚಿತ್ರದ ಚಿತ್ರೀಕರಣದ ವೇಳೆ ೮ ಮಂದಿಗೆ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿದ್ದರಿಂದ ಶೂಟಿಂಗ್ ಸ್ಥಗಿತಗೊಳಿಸಲಾಗಿದೆ.
ರಜನಿಕಾಂತ್ ಅವರು ’ಅಣ್ಣಾತ್ತೆ’ ಚಿತ್ರವನ್ನು ಜನವರಿ ೧೨ರೊಳಗೆ ಮುಗಿಸಬೇಕು ಎಂದು ಪ್ಲಾನ್ ಹಾಕಿಕೊಂಡಿದ್ದರು. ಅದಕ್ಕಾಗಿ ಕಳೆದ ಕೆಲವು ದಿನಗಳಿಂದ, ಪ್ರತಿದಿನ ೧೨ ಗಂಟೆಗಳ ಕಾಲ ಕೆಲಸ ಮಾಡುತ್ತಿದ್ದರು.
ಚಿತ್ರತಂಡದ ನಾಲ್ವರಲ್ಲಿ ಕರೊನಾ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಚಿತ್ರೀಕರಣವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿ ರಜಿನಿಕಾಂತ್ ಪ್ರತ್ಯೇಕವಾಗಿದ್ದರು.
ಚಿತ್ರರಂಗದಿಂದ ರಾಜಕೀಯ ಅಂಗಳಕ್ಕೆ ಧುಮುಕಿ ಸಂಚಲನ ಸೃಷ್ಟಿಸಿರುವ ಸೂಪರ್ ಸ್ಟಾರ್ ರಜನಿಕಾಂತ್ ಇಂದು ಬೆಳಗ್ಗೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ರಕ್ತದೊತ್ತಡದಲ್ಲಿ ಏರುಪೇರು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಹೈದ್ರಾಬಾದ್‌ನ ಅಪೋಲೊ ಆಸ್ಪತ್ರೆಗೆ ದಾಖಲಾಗಿದ್ದಾರೆ.