೨೫ ವರ್ಷ ಮೇಲ್ಪಟ್ಟವರಿಗೂ ಲಸಿಕೆ ಸಿಎಂ ಉದ್ಧವ್ ಠಾಕ್ರೆ ಪಿಎಂಗೆ ಪತ್ರ

೨೫ ವರ್ಷ ಮೇಲ್ಪಟ್ಟವರಿಗೂ ಲಸಿಕೆ ಸಿಎಂ ಉದ್ಧವ್ ಠಾಕ್ರೆ ಪಿಎಂಗೆ ಪತ್ರ

ಮುಂಬೈ: ೨೫ ವರ್ಷ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ಹಾಕಲು ಅವಕಾಶ ನೀಡಬೇಕು. ಅಗತ್ಯವಿರುವ ಲಸಿಕೆ ಪೂರೈಕೆ ಮಾಡಬೇಕೆಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಪ್ರಧಾನಿಗೆ ಪತ್ರ ಬರೆದಿದ್ದಾರೆ.
ಮಹಾರಾಷ್ಟ್ರದಲ್ಲಿ ಸೋಂಕಿತರ ಸಂಖ್ಯೆ ತೀವ್ರವಾಗಿ ಏರಿಕೆಯಾಗುತ್ತಿದೆ. ಮಕ್ಕಳು ಮತ್ತು ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಸೋಂಕಿಗೆ ತುತ್ತಾಗುತ್ತಿದ್ದಾರೆ. ಲಸಿಕೆ ನೀಡಿಕೆ ಕಾರ್ಯ ವೇಗವಾಗಿ ನಡೆಯುತ್ತಿದೆ. ಹೊಸ ಲಸಿಕೆ ಕೇಂದ್ರಗಳನ್ನು ಆರಂಭಿಸಲು ಅವಕಾಶ ನೀಡಬೇಕು. ೨೫ ವರ್ಷ ಮೇಲ್ಪಟ್ಟವರಿಗೆ ಎಲ್ಲರಿಗೂ ಲಸಿಕೆ ನೀಡಲು ಅವಕಾಶ ನೀಡಬೇಕೆಂದು ಮನವಿ ಮಾಡಿದ್ದಾರೆ.
ಗುರುವಾರ ಪ್ರಧಾನಿಯವರೊಂದಿಗೆ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ನಡೆಯಲಿದ್ದು, ಕೋವಿಡ್ ನಿರ್ವಹಣೆ ಕುರಿತು ಚರ್ಚಿಸಲಾಗುವುದು. ಅದಕ್ಕಿಂತ ಮೊದಲೇ ಉದ್ಧವ್ ಠಾಕ್ರೆ ಪ್ರಧಾನಿಗೆ ಪತ್ರ ಬರೆದು ೨೫ ವರ್ಷ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ನೀಡಲು ಕ್ರಮಕೈಗೊಳ್ಳುವ ಕುರಿತು ಮನವಿ ಮಾಡಿದ್ದಾರೆ.