ಬೆಲೆ ಏರಿಕೆ ಖಂಡಿಸಿ ಸೈಕಲ್ ಏರಿದ ಕಾಂಗ್ರೆಸ್

Congress Protest

ಬೆಲೆ ಏರಿಕೆ ಖಂಡಿಸಿ  ಸೈಕಲ್ ಏರಿದ ಕಾಂಗ್ರೆಸ್

ಬೆಂಗಳೂರು: ಇಂಧನ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಪಕ್ಷ ಹಮ್ಮಿಕೊಂಡಿರುವ ಬೃಹತ್ ಸೈಕಲ್ ಜಾಥಾಗೆ ಕೆಪಿಸಿಸಿ ಕಚೇರಿ ಮುಂಭಾಗ ಚಾಲನೆ ದೊರೆಯಿತು.

ನಗರದ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿ ಮುಂಭಾಗ ಕಾರ್ಯಾಧ್ಯಕ್ಷರಾದ ರಾಮಲಿಂಗಾರೆಡ್ಡಿ ಹಾಗೂ ಅಹ್ಮದ್ ನೇತೃತ್ವದಲ್ಲಿ ನೂರಾರು ಕಾರ್ಯಕರ್ತರು ಸೈಕಲ್ ಏರಿ ಮೆರವಣಿಗೆ ನಡೆಸಿದ್ದಾರೆ.

ಬಿಗಿ ಪೊಲೀಸ್ ಬಂದೋಬಸ್ತ್ನಲ್ಲಿ ಮೆರವಣಿಗೆಗೆ ಚಾಲನೆ ನೀಡಲಾಯ್ತು. ಪ್ರಧಾನಿ ನರೇಂದ್ರ ಮೋದಿ ಮುಖವಾಡ ಧರಿಸಿದ ವ್ಯಕ್ತಿ ಸೈಕಲ್ ತುಳಿದದ್ದು ಗಮನ ಸೆಳೆಯಿತು. ಇನ್ನೊಂದೆಡೆ ಕುದುರೆ ಟಾಂಗಾ ಮೆರವಣಿಗೆಯಲ್ಲಿ ಕಂಡು ಬಂತು. ಸಾಕಷ್ಟು ಸಂಖ್ಯೆಯಲ್ಲಿ ಯುವಕರು ಹಾಗೂ ಮಕ್ಕಳು ಮೆರವಣಿಗೆಯಲ್ಲಿ ಭಾಗವಹಿಸಿದ್ದರು.

ಸೈಕಲ್ ಜಾಥಾಗೆ ಚಾಲನೆ ನೀಡುವುದಕ್ಕೂ ಮುನ್ನ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ರಾಮಲಿಂಗಾರೆಡ್ಡಿ ಹಾಗೂ ಸಲೀಂ ಅಹ್ಮದ್ ಮಾತನಾಡಿ, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಅನಗತ್ಯವಾಗಿ ಬೆಲೆ ಏರಿಕೆ ಮಾಡುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.