ಮಾಜಿ ಸಂಸದ ಜಿ.ಮಾದೇಗೌಡ ಆರೋಗ್ಯದಲ್ಲಿ ಚೇತರಿಕೆ

G Madegowda

ಮಾಜಿ ಸಂಸದ ಜಿ.ಮಾದೇಗೌಡ ಆರೋಗ್ಯದಲ್ಲಿ ಚೇತರಿಕೆ

ಬೆಂಗಳೂರು: ರಾಜಕೀಯದ ಹಿರಿಯ ಮುತ್ಸದ್ದಿ, ರೈತ ಪರ ಹೋರಾಟಗಾರ, ಸಕ್ಕರೆ ನಾಡಿನ ಮಾಜಿ ಸಂಸದ ಜಿ.ಮಾದೇಗೌಡರು ಶ್ವಾಸಕೋಶ ಸಮಸ್ಯೆಯಿಂದ ಬಳಲುತ್ತಿದ್ದು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕಳೆದ ೧೫ ದಿನಗಳ ಹಿಂದೆ ಶ್ವಾಸಕೋಶದಲ್ಲಿ ತೊಂದರೆ ಕಾಣಿಸಿಕೊಂಡ ಹಿನ್ನೆಲೆ ಬೆಂಗಳೂರಿನ ವಿಕ್ರಂ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ಮುಂದುವರೆದಿದ್ದು, ನಾಳೆ ಆಸ್ಪತ್ರೆಯಿಂದ ಬಿಡುಗಡೆ ಮಾಡುವ ಸಾಧ್ಯತೆಯಿದೆ. ೧೫ ದಿನಗಳಿಂದ ಚಿಕಿತ್ಸೆ ಕೊಡಿಸುತ್ತಿದ್ದರೂ, ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿಲ್ಲ. ಹಾಗಾಗಿ ಮದ್ದೂರಿನ ಜಿ.ಮಾದೇಗೌಡರಿಗೆ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲೇ ಚಿಕಿತ್ಸೆ ನೀಡಲು ತಯಾರಿ ಮಾಡಿಕೊಳ್ಳಲಾಗುತ್ತಿದೆ. ನಾಳೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಿಸಲಾಗುವುದು ಎಂದು ಮಾದೇಗೌಡರ ಪುತ್ರ ವಿಧಾನ ಪರಿಷತ್ ಮಾಜಿ ಸದಸ್ಯ ಮಧು ಮಾದೇಗೌಡ ತಿಳಿಸಿದ್ದಾರೆ.