ಇಂದಿನಿಂದ ಘಾಟಿ ಸುಬ್ರಹ್ಮಣ್ಯ ಸ್ವಾಮಿ ದೇವಾಲಯ ಓಪನ್ ದರ್ಶನಕ್ಕೆ ಮಾತ್ರ ಅವಕಾಶ

Ghati subramanya

ಇಂದಿನಿಂದ ಘಾಟಿ ಸುಬ್ರಹ್ಮಣ್ಯ ಸ್ವಾಮಿ ದೇವಾಲಯ ಓಪನ್ ದರ್ಶನಕ್ಕೆ ಮಾತ್ರ ಅವಕಾಶ

ದೊಡ್ಡಬಳ್ಳಾಪುರ:  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ  ಪ್ರಸಿದ್ಧ ನಾಗಾರಾಧನೆಯ ಕ್ಷೇತ್ರ ಘಾಟಿ ಸುಬ್ರಮಣ್ಯ ಸ್ವಾಮಿ ದೇವಾಲಯ ಇಂದು ಮುಂಜಾನೆಯಿಂದಲೇ ತೆರೆಯಲಾಗಿದ್ದು ದೇವರ ದರ್ಶನಕ್ಕೆ ಮಾತ್ರ ಅವಕಾಶ ಮಾಡಿಕೊಡಲಾಗಿದೆ 
ಮುಂಜಾನೆ ೬ ಗಂಟೆಗೆ ದೇವಾಲಯದ ಆಡಳಿತ ಮಂಡಳಿ ಹಾಗೂ ಅರ್ಚಕರು ಶಾಸ್ತ್ರೋಕ್ತವಾಗಿ ದೇವಾಲಯದ ಪ್ರಧಾನ ದ್ವಾರಕ್ಕೆ ಪೂಜಾ ಕಾರ್ಯಗಳನ್ನು ನೆರವೇರಿಸಿ ದೇವಾಲಯದ ಬಾಗಿಲು ತೆರೆಯುವ ಮೂಲಕ ಭಕ್ತರಿಗೆ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ   ರಾಜ್ಯ ಸರ್ಕಾರ ಕೋವಿಡ್ ಅನ್ ಲಾಕ್ ಮೂರನೇ ಹಂತದಲ್ಲಿ ಧಾರ್ಮಿಕ ದತ್ತಿ ಇಲಾಖೆಗೆ ಸೇರಿರುವ ಹಾಗೂ ಇತರೆ ಎಲ್ಲಾ ರೀತಿಯ ದೇವಾಲಯಗಳಿಗೆ ಭಕ್ತಾಧಿಗಳ ಪ್ರವೇಶಕ್ಕೆ ಅವಕಾಶ ನೀಡಿರುವ ಹಿನ್ನೆಲೆಯಲ್ಲಿ ಭಾನುವಾರ ದೇವಾಲಯ ಆವರಣವನ್ನು ಶುಚಿಗೊಳಿಸಿ ಸ್ಯಾನಿಟೈಸ್ ಮಾಡಲಾಯಿತು 
ದೇವಾಲಯಕ್ಕೆ ಆಗಮಿಸುವ ಭಕ್ತರು ಕಡ್ಡಾಯವಾಗಿ ಕೋವಿಡ್ ನಿಯಮಗಳನ್ನು ಪಾಲಿಸಿಕೊಂಡು ಆಗಮಿಸಬೇಕು ಎಂದು ತಿಳಿಸಲಾಗಿದೆ ಸರ್ಕಾರ ಅನ್ಲಾಕ್ ಸಂದರ್ಭದಲ್ಲಿ ಸೂಚಿಸಲಾಗಿರುವ ಎಲ್ಲಾ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಲೇಬೇಕು ಇನ್ನು ದೇವಾಲಯದಲ್ಲಿ ಯಾವುದೇ ಸೇವೆ, ಪ್ರಸಾದ ವಿತರಣೆ ಇರುವುದಿಲ್ಲ ಕೇವಲ ದರ್ಶನಕ್ಕೆ ಮಾತ್ರ ಅವಕಾಶ ಎಂದು ದೇವಾಲಯದ ಮುಖ್ಯ ಕಾರ್ಯನಿರ್ವಹಣಾಕಾರಿ ಎನ್,ಕೃಷ್ಣಪ್ಪ ತಿಳಿಸಿದ್ದಾರೆ.