ಕಾಂಗ್ರೆಸ್ ಗೆದ್ದರೆ ಡಿಕೆಶಿ ಸಿಎಂ

Nalpad

ಕಾಂಗ್ರೆಸ್ ಗೆದ್ದರೆ ಡಿಕೆಶಿ ಸಿಎಂ

ಉಡುಪಿ: ಮುಂದಿನ ಮುಖ್ಯಮಂತ್ರಿ ಫೈಟ್ ಕರ್ನಾಟಕ ಕಾಂಗ್ರೆಸ್ನಲ್ಲಿ ಮತ್ತೆ ಮುನ್ನೆಲೆಗೆ ಬಂದಿದೆ.

ಕರ್ನಾಟಕ ಯೂತ್ ಕಾಂಗ್ರೆಸ್ ಮುಂದಿನ ಅಧ್ಯಕ್ಷರಾಗಿ ನೇಮಕಗೊಂಡಿರುವ ಬೆನ್ನಿಗೇ ಮಹಮ್ಮದ್ ಹ್ಯಾರಿಸ್ ನಲಪಾಡ್ ಅವರು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪರ ಬ್ಯಾಟಿಂಗ್ ಮಾಡಿದ್ದಾರೆ. ಇಲ್ಲಿವರೆಗೂ ಹೆಚ್ಚಾಗಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪರ ಮೊಳಗುತ್ತಿದ್ದಮುಂದಿನ ಮುಖ್ಯಮಂತ್ರಿಸ್ವಘೋಷ ವಾಕ್ಯ ಈಗ ಡಿಕೆಶಿ ಪರವಾಗಿಯೂ ಮೊಳಗುತ್ತಿದೆ.

ರಾಜ್ಯದಲ್ಲಿ ಮುಂದೆ ಕಾಂಗ್ರೆಸ್ ಸರ್ಕಾರ ಬಂದ್ರೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿ ಆಗುತ್ತಾರೆ ಎಂದು ಯೂತ್ ಕಾಂಗ್ರೆಸ್ ಮುಖಂಡ ಮೊಹಮ್ಮದ್ ನಲಪಾಡ್ ಹೇಳಿದ್ದಾರೆ.

ಮಂಗಳೂರಿನ ಕರಾವಳಿ ಭಾಗದಲ್ಲಿ ಮೀನುಗಾರರ ಜೊತೆಗೆ ಮಾತನಾಡಿದ ಅವರು, ಮುಂದಿನ ಚುನಾವಣೆಯಲ್ಲಿ ಗೆದ್ದು ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿ ಆಗ್ತಾರೆ ಎಂದು ಹೇಳಿದ್ದಾರೆ. ಮೂಲಕ ಕಾಂಗ್ರೆಸ್ ನಲ್ಲಿ ಮುಂದಿನ ಸಿಎಂ ಕುರಿತ ಚರ್ಚೆಗೆ ಕಾರಣರಾಗಿದ್ದಾರೆ. ಕಾಂಗ್ರೆಸ್ ಪಕ್ಷದ ಹಲವು ಶಾಸಕರು, ಮುಖಂಡರು ಮುಂದಿನ ಸಿಎಂ ಸಿದ್ದರಾಮಯ್ಯ ಎಂದು ಹೇಳಿಕೆ ಕೊಟ್ಟಿದ್ದಾರೆ. ಇದು ಹಲವು ಚರ್ಚೆಗಳಿಗೆ ಗ್ರಾಸವಾಗಿತ್ತು. ಇದೀಗ ನಲಪಾಡ್ ಡಿ.ಕೆ.ಶಿವಕುಮಾರ್ ಪರ ಬ್ಯಾಟ್ ಬೀಸಿದ್ದಾರೆ.