ಮತ್ತೆ ತೈಲ ಬೆಲೆಯಲ್ಲಿ ಏರಿಕೆ

Petrol

ಮತ್ತೆ ತೈಲ ಬೆಲೆಯಲ್ಲಿ ಏರಿಕೆ

ನವದೆಹಲಿ: ದೇಶದ ಪ್ರಮುಖ ಮೂರು ತೈಲ ಕಂಪನಿಗಳು ಮತ್ತೆ ಪೆಟ್ರೋಲ್, ಡೀಸೆಲ್ ದರವನ್ನು ಏರಿಕೆ ಮಾಡಿವೆ.

ಮೇ ೪ರಿಂದ ಇಂದಿನ ತನಕ ಒಟ್ಟು ೩೬ ಬಾರಿ ಹಾಗೂ ಜೂನ್ ತಿಂಗಳಲ್ಲೇ ೧೮ ಬಾರಿ ಬೆಲೆ ಏರಿಕೆ ಮಾಡಲಾಗಿದೆ. ಜುಲೈ ೬ರಂದು ಇಂಧನ ದರದಲ್ಲಿ ಯಾವುದೇ ಬದಲಾವಣೆಯಾಗಿರಲಿಲ್ಲ. ಜು.೭ರಂದು ಪೆಟ್ರೋಲ್ ಬೆಲೆ ಸರಾಸರಿ ೩೫ ಪೈಸೆ ಪ್ರತಿ ಲೀಟರ್ ಏರಿಕೆ, ಡೀಸೆಲ್ ಬೆಲೆ ೧೭ ಪೈಸೆ ಪ್ರತಿ ಲೀಟರ್ ನಂತೆ ಏರಿಕೆಯಾಗಿದೆ.

ದೆಹಲಿಯಲ್ಲಿ ಬುಧವಾರದಂದು ಪೆಟ್ರೋಲ್ ಪ್ರತಿ ಲೀಟರ್ಗೆ ರೂ.೧೦೦.೨೭ ಹಾಗೂ ಡೀಸೆಲ್ ಪ್ರತಿ ಲೀಟರ್ಗೆ ರೂ.೮೯.೫೯ಗೆ ತಲುಪಿದೆ.

ಮುಂಬೈನಲ್ಲಿ ಅತ್ಯಧಿಕ ಪೆಟ್ರೋಲ್ ರೂ.೧೦೬.೩೧ ಪ್ರತಿ ಲೀಟರ್, ಡೀಸೆಲ್ ರೂ.೯೭.೧೫ ಪ್ರತಿ ಲೀಟರ್ನಷ್ಟಿದೆ. ಬೆಂಗಳೂರಿನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ ೧೦೩.೬೨ಕ್ಕೆ ಏರಿಕೆಯಾಗಿದ್ದು, ಪ್ರತಿ ಲೀಟರ್ ಡೀಸೆಲ್ ದರ ೯೪.೯೫ ರೂ.ಗೆ ಏರಿಕೆಯಾಗಿದೆ. ಕೋಲ್ಕತಾದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ ೧೦೦.೨೯ಕ್ಕೆ ಏರಿಕೆಯಾಗಿದ್ದು, ಪ್ರತಿ ಲೀಟರ್ ಡೀಸೆಲ್ ದರ ೯೨.೫೬ ರೂ.ಗೆ ಏರಿಕೆಯಾಗಿದೆ. ಚೆನ್ನೈನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ ೧೦೧.೧೧ಕ್ಕೆ ಏರಿಕೆಯಾಗಿದ್ದು, ಪ್ರತಿ ಲೀಟರ್ ಡೀಸೆಲ್ ದರ ೯೪.೧೨ ರೂ.ಗೆ ಏರಿಕೆಯಾಗಿದೆ,