ಸ್ವಪಕ್ಷೀಯ ಶಾಸಕರ ವಿರುದ್ಧ ದೂರು 

Renukacharya

ಸ್ವಪಕ್ಷೀಯ ಶಾಸಕರ ವಿರುದ್ಧ ದೂರು 

ಬೆಂಗಳೂರು: ಸ್ವಪಕ್ಷೀಯ ಶಾಸಕರಿಂದಲೇ ಪಕ್ಷ ವಿರೋಧಿ ಚಟುವಟಿಕೆಗಳು ಮುಂದುವರೆದಿರುವ ಹಿನ್ನೆಲೆಯಲ್ಲಿ ವರಿಷ್ಠರಿಗೆ ದೂರು ನೀಡಲು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ನಿರ್ಧರಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪದೇ ಪದೇ ಸಿಎಂ ಬಿ.ಎಸ್. ಯಡಿಯೂರಪ್ಪ ವಿರುದ್ಧ ವಾಗ್ದಾಳಿ ನಡೆಸುತ್ತಿರುವ ಎಂಎಲ್ಸಿ ಹೆಚ್. ವಿಶ್ವನಾಥ್ ಹಾಗೂ ಸಿಎಂ ವಿರುದ್ಧ ಭ್ರಷ್ಟಾಚಾರ ಆರೋಪಗಳನ್ನು ಮಾಡುತ್ತ ಅನಗತ್ಯ ಹೇಳಿಕೆಗಳನ್ನು ನೀಡುತ್ತಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ವರಿಷ್ಠರಿಗೆ ದೂರು ನೀಡಲು ಯೋಜನೆ ರೂಪಿಸಿದೆ.

ಮತ್ತೆ ೨೦೧೩ರ ಪರಿಸ್ಥಿತಿ ಉದ್ಭವವಾಗದಂತೆ ನೋಡಿಕೊಳ್ಳಿ. ಇಬ್ಬರು ನಾಯಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ವರಿಷ್ಠರಿಗೆ ಮನವಿ ಮಾಡಲಿದ್ದಾರೆಂದು ತಿಳಿದುಬಂದಿದೆ