ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿಲ್ಲ... 

Shivrajkumar

ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿಲ್ಲ... 

ಬೆಂಗಳೂರು: ಇದೇ ತಿಂಗಳು ೧೨ರಂದು ನನ್ನ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿಲ್ಲ. ದಯಮಾಡಿ ಯಾರೂ ಕೂಡ ಮನೆ ಹತ್ತಿರ ಬರಬೇಡಿ ಅಂತಾ ಹ್ಯಾಟ್ರಿಕ್ ಹೀರೋ ಶಿವರಾಜ್ಕುಮಾರ್ ಅಭಿಮಾನಿಗಳಿಗೆ ಮನವಿ ಮಾಡಿದ್ದಾರೆ.

ಅಷ್ಟೇ ಅಲ್ಲ ನನ್ನ ಹುಟ್ಟುಹಬ್ಬದ ದಿನ ನಾನು ಬೆಂಗಳೂರಿನಲ್ಲಿ ಇರುವುದಿಲ್ಲ. ದಯವಿಟ್ಟು ಯಾರು ತಪ್ಪು ತಿಳಿದುಕೊಳ್ಳಬೇಡಿ ಅಂತ ಹ್ಯಾಟ್ರಿಕ್ ಹೀರೋ ವಿಡಿಯೋ ಮೂಲಕ ಅಭಿಮಾನಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ. ಪ್ರತಿಯೊಬ್ಬರೂ ಕೊರೊನಾ ಲಸಿಕೆ ಹಾಕಿಸಿಕೊಳ್ಳಿ ಎಂದು ಕಿವಿಮಾತು ಹೇಳಿದ್ದಾರೆ. ಕೊರೊನಾ ಮುಗಿದ ಮೇಲೆ ನಿಮ್ಮನ್ನು ಭೇಟಿ ಮಾಡುತ್ತೇನೆಂದು ತಿಳಿಸಿದ್ದಾರೆ.

ಸದ್ಯ ರಾಜ್ಯದಲ್ಲಿ ಕೊರೊನಾ ಹಾವಳಿ ಇನ್ನೂ ಇರುವುದರಿಂದ ಹ್ಯಾಟ್ರಿಕ್ ಹೀರೋ ಶಿವರಾಜ್ಕುಮಾರ್ ವರ್ಷವೂ ಕೂಡ ತಮ್ಮ ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳದಿರಲು ನಿರ್ಧರಿಸಿದ್ದಾರೆ. ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಮನವಿನನ್ನ ಹುಟ್ಟುಹಬ್ಬಕ್ಕಿಂತ ನಿಮ್ಮೆಲ್ಲರ ಆರೋಗ್ಯ ಮುಖ್ಯ ಎಂದರು.