ಗಣಿಗಾರಿಕೆ ಪ್ರದೇಶಗಳಿಗೆ ಸುಮಲತಾ ಭೇಟಿ ದಳಪತಿಗಳು ಸಿಡಿಮಿಡಿ

Sumalatha Ambarish

ಗಣಿಗಾರಿಕೆ ಪ್ರದೇಶಗಳಿಗೆ ಸುಮಲತಾ ಭೇಟಿ  ದಳಪತಿಗಳು ಸಿಡಿಮಿಡಿ

ಮಂಡ್ಯ: ಗಣಿಗಾರಿಕೆ ಹಾಗೂ ಕೆಆರ್ಎಸ್ ಜಲಾಶಯದ ಬಿರುಕಿಗೆ ಸಂಬಂಧಿಸಿದಂತೆ ಧ್ವನಿ ಎತ್ತಿರುವ ಮಂಡ್ಯ ಸಂಸದೆ ಸುಮಲತಾ ಇಂದು ಮಂಡ್ಯ ಜಿಲ್ಲಾ ಪ್ರವಾಸ ಕೈಗೊಂಡಿದ್ದು ಅಕ್ರಮ ಗಣಿಗಾರಿಕೆ ನಡೆಯುತ್ತಿರುವ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ.

ಮೊದಲು ಸುಮಲತಾ ಅವರು ತಾಲೂಕು ಇಂಡುವಾಳು ಗ್ರಾಮಕ್ಕೆ ಭೇಟಿ ನೀಡಿ ಎನ್.ಶಂಕರೇಗೌಡ ಚಾರಿಟಬಲ್ ಟ್ರಸ್ಟ್ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು ನಂತರ ಕೊವಿಡ್ನಿಂದ ಮೃತಪಟ್ಟ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಲಿದ್ದಾರೆ. ಬಳಿಕ ಶ್ರೀರಂಗಪಟ್ಟಣ ತಾಲೂಕಿನ ಚೆನ್ನನಕೆರೆ ಗ್ರಾಮದ ಬಳಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆ ಸ್ಥಳಕ್ಕೆ ಭೇಟಿ ನೀಡಲಿದ್ದು, .೩೦ಕ್ಕೆ ಹಂಗರಹಳ್ಳಿ ಗ್ರಾಮದ ಬಳಿಯ ಕಲ್ಲು ಗಣಿಗಾರಿಕೆ ಸ್ಥಳಕ್ಕೆ ಹಾಗೂ .೩೦ಕ್ಕೆ ಪಾಂಡವಪುರ ತಾಲೂಕಿನ ಬೇಬಿ ಬೆಟ್ಟಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆಂದು ಗೊತ್ತಾಗಿದೆ.